KCET Results 2025: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಪ್ರಕಟ ಮಾಡಿದ್ದಾರೆ. ಹಾಗಾದ್ರೆ ಫಲಿತಾಂಶ ವೀಕ್ಷಣೆ ವೆಬ್‌ಸೈಟ್‌ಗಳು ಹಾಗೂ ಟಾಪರ್ಸ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಇಂದು (ಮೇ 24) ಬೆಳಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಮಧ್ಯಾಹ್ನ 2 ಗಂಟೆಯಿಂದ ವೀಕ್ಷಣೆ ಮಾಡಬಹುದು.
ಗಂಟೆಯಿಂದ ವೀಕ್ಷಣೆ ವೆಬ್‌ಸೈಟ್‌ಗಳು
https://cetonline.Karnataka.gov.in/ugcetrank2025/rank2025/checkresult.aspx
ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ಅಧಿಕೃತ ಕೆಇಎ ವೆಬ್‌ಸೈಟ್ cetonline.karnataka.gov.inಗೆ ಭೇಟಿ ನೀಡಬೇಕು.
* ಕೆಸಿಇಟಿ ಫಲಿತಾಂಶ 2025 ಮೇಲೆ ಕ್ಲಿಕ್ ಮಾಡಬೇಕು.
* ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಅಲ್ಲಿ ಕೇಳಲಾದ ಮಾಹಿತಿ ನಮೂದಿಸಿ.
* ಬಳಿಕ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ವೀಕ್ಷಣೆ ಮಾಡಬಹುದು.
Leave a Reply