ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಸಂವಿಧಾನ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಡಾ. ದಿಲೀಷ್ ಶಶಿ ಅವರು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಅವರು ಸಂವಿಧಾನ ದ್ರಢತೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ನಾಗರಿಕರ ಕರ್ತವ್ಯಗಳ ಕುರಿತು ನೆನಪಿಸುವ ಸಂವಿಧಾನ ಪ್ರತಿಜ್ಞಾವಿಧಿಯನ್ನು ಭೋದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂವಿಧಾನ ದಿನದ ಮಹತ್ವವನ್ನು ಸ್ಮರಿಸಿದರು.











Leave a Reply