ಸವದತ್ತಿ, ಫೆ.6:
ಇಂದು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಭಾವತಿ ಫಕೀರಪುರ ಅವರು ಅಧಿಕಾರ ವಹಿಸಿಕೊಂಡರು.
ಸರ್ಕಾರದ ಆದೇಶದಂತೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಪ್ರಭಾವತಿ ಫಕೀರಪುರ ಅವರಿಗೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದ್ದು, ಇಂದು ಅಧಿಕೃತವಾಗಿ ಕರ್ತವ್ಯ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲು ಜಕಾತಿ, ಮುಖಂಡರಾದ ಪ್ರಕಾಶ ಲಮಾಣಿ, ಸಂತೋಷ ಲಮಾಣಿ, ಅಮೀರ್ ಗೋರಿನಾಯ್ಕ, ಶ್ರೀನಿವಾಸ ಲಮಾಣಿ ಹಾಗೂ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೇವಾಲಯದ ಸಮಗ್ರ ಅಭಿವೃದ್ಧಿ, ಭಕ್ತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಹಾಗೂ ಆಡಳಿತಾತ್ಮಕ ಕಾರ್ಯಗಳಲ್ಲಿ ಪಾರದರ್ಶಕತೆ ಕಾಪಾಡಲಾಗುವುದು ಎಂದು ಅವರು ತಿಳಿಸಿದರು.









Leave a Reply