ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದ ಪರಿಣಾಮ ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವವರು.ಮೃತ ಮಹದೇವಸ್ವಾಮಿಯ ಹಿರಿಯ ಪುತ್ರಿ ಅರ್ಪಿತಾ ಮನೆಬಿಟ್ಟು ಹೋಗಿದ್ದಳು.
ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಮಗಳು, ಯುವಕನೊಂದಿಗೆ ಓಡಿ ಹೋಗಿರೋ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply