ಸವದತ್ತಿ: ಜನವರಿ 26ರಂದು ಹಮ್ಮಿಕೊಳ್ಳಲಾಗುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತುಬದ್ಧವಾಗಿ ಹಾಗೂ ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಸವದತ್ತಿ ತಾಲೂಕು ಆಡಳಿತದ ವತಿಯಿಂದ ಇಂದು ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲಾಯಿತು.
ಸಭೆಯಲ್ಲಿ ಧ್ವಜಾರೋಹಣ ಹಾಗೂ ಪಥಸಂಚಲನವನ್ನು ಸಮರ್ಪಕವಾಗಿ ಆಯೋಜಿಸುವುದು, ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯವಿರುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ದೇಶದ ಸಂವಿಧಾನ ಮೌಲ್ಯಗಳನ್ನು ಸಾರುವ ಈ ರಾಷ್ಟ್ರೀಯ ಹಬ್ಬವನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ..!

Leave a Reply