ಇತಿಹಾಸದಲ್ಲಿ ಬರೆದಿಡುವ ಕಾರ್ಯ ಮಾಡುತ್ತೇನೆ:ವಿಶ್ವಾಸ ವೈದ್ಯ..!!

ಸವದತ್ತಿ: ನಗರದ ಎಸ್.ಕೆ. ಹೈಸ್ಕೂಲ್ ಮೈದಾನದಲ್ಲಿ ತಾಲೂಕಾ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಶಾಸಕ ವಿಶ್ವಾಸ ವೈದ್ಯ, ಸಂವಿಧಾನ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ದೇಶದ ಏಕತೆ ಮತ್ತು ಸಮೃದ್ಧಿಗೆ ಅದು ಅಡಿಪಾಯ ಎಂದು ಹೇಳಿದರು.

ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ರೂಪಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಸ್ಮರಿಸುವ ಈ ದಿನದ ಮಹತ್ವವನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ದೊಡ್ಡ ಗುರಿ ಇಟ್ಟುಕೊಂಡು ಶಿಸ್ತು, ಪರಿಶ್ರಮ ಮತ್ತು ದೇಶಭಕ್ತಿಯೊಂದಿಗೆ ಜೀವನದಲ್ಲಿ ಮುನ್ನಡೆಯಬೇಕೆಂದು ಸಲಹೆ ನೀಡಿದರು.

ತಾನು ಶಾಸಕನಾಗಿ ಕಳೆದ ಸುಮಾರು ಎರಡುವರೆ ವರ್ಷಗಳಲ್ಲಿ ಸವದತ್ತಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದಾಗಿ ತಿಳಿಸಿದ ವಿಶ್ವಾಸ ವೈದ್ಯ, ರಸ್ತೆ ಅಭಿವೃದ್ಧಿ, ಒಳಚರಂಡಿ ಯೋಜನೆ, ಪುರಸಭೆ ಉನ್ನತೀಕರಣ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ ಹಾಗೂ ತಿರುಪತಿ ಮಾದರಿಯಲ್ಲಿ ದೇವಸ್ಥಾನದ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳು ಇತಿಹಾಸದಲ್ಲಿ ಬರೆದಿಡುವಂತಿವೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ಮಾಡಿಯೇ ಜನರ ಮುಂದೆ ಬರಲಾಗುವುದು ಎಂದು ಅವರು ಭರವಸೆ ನೀಡಿದರು.

ಗಣರಾಜ್ಯೋತ್ಸವ ಪ್ರಯುಕ್ತ ವಿವಿಧ ಮನರಂಜನಾ ಕಾರ್ಯಕ್ರಮ ಜರುಗಿದವು

ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಮಲ್ಲಿಕಾರ್ಜುನ ಹೆಗ್ಗಣವರ್, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುದ್ರಿ, ನಗರಸಭೆ ಪೌರಾಯುಕ್ತ ಸಂಗಣಬಸಯ್ಯ ಜಿ, ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ ರಾಠೋಡ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *