ಸವದತ್ತಿ ಪಟ್ಟಣ ಸಮಗ್ರ ಅಭಿವೃದ್ಧಿಗೆ ಭೂಮಿಪೂಜೆ..!!

ಸವದತ್ತಿ:

ಸವದತ್ತಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ, ಸವದತ್ತಿ ಪುರಸಭೆ ವ್ಯಾಪ್ತಿಯ ರಾಮಾಪೂರ ಸೈಟ್‌ನ ಅರಳಿಗಿಡದ ಓಣಿ ಹಾಗೂ ಶಾಂತಿನಗರ ಪ್ರದೇಶಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ವತಿಯಿಂದ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಲಾಯಿತು.

ಸುಮಾರು 74 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಈ ಯೋಜನೆಯಡಿ ಸುವ್ಯವಸ್ಥಿತ ಚರಂಡಿ ವ್ಯವಸ್ಥೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳಿಂದ ಸ್ಥಳೀಯ ನಿವಾಸಿಗಳಿಗೆ ಉತ್ತಮ ಮೂಲಭೂತ ಸೌಕರ್ಯ ದೊರೆಯಲಿದ್ದು, ಸಂಚಾರ ಸುಗಮವಾಗುವ ಜೊತೆಗೆ ಸ್ವಚ್ಛತೆ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ.

ಜನರ ದೈನಂದಿನ ಸಮಸ್ಯೆಗಳಿಗೆ ಸ್ಪಂದಿಸಿ, ಕ್ಷೇತ್ರದ ಪ್ರತಿಯೊಂದು ವಾರ್ಡ್ ಹಾಗೂ ಓಣಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಎಲ್ಲ ಪ್ರದೇಶಗಳಿಗೂ ಹಂತ ಹಂತವಾಗಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು, ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಭಾಗದ ನಾಗರಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *