ಸೈಬರ್ (cyber crime) ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಜೀವನವನ್ನು ಕೊನೆಗೊಳಿಸಲು ದಂಪತಿ ನಿರ್ಧರಿಸಿದ್ದರು. ತಮ್ಮ ಡೆತ್ ನೋಟ್‌ನಲ್ಲಿ, ದಂಪತಿಗಳು ಗೋವಾದಲ್ಲಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ.
ಬೆಳಗಾವಿ: ಆಘಾತಕಾರಿ ಘಟನೆಯೊಂದರಲ್ಲಿ ಸೈಬರ್ ವಂಚಕರು ವೀಡಿಯೊ ಕರೆಗಳ ಮೂಲಕ ನಡೆಸಿದ ಮಾನಸಿಕ ಹಿಂಸೆಯಿಂದಾಗಿ ಖಾನಾಪುರ ಬಳಿ ವೃದ್ಧ ದಂಪತಿಗಳು ಗುರುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಎಂದು ಗುರುತಿಸಲಾಗಿದೆ.
ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಲೇದ್ ಅವರ ಪ್ರಕಾರ, ದಂಪತಿಗಳು ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡಿದ್ದರು. ಅಷ್ಟಕ್ಕೆ ಸುಮ್ಮನಾಗದೆ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಜೀವನವನ್ನು ಕೊನೆಗೊಳಿಸಲು ದಂಪತಿ ನಿರ್ಧರಿಸಿದ್ದರು. ತಮ್ಮ ಡೆತ್ ನೋಟ್‌ನಲ್ಲಿ, ದಂಪತಿಗಳು ಗೋವಾದಲ್ಲಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ.
Leave a Reply