ಪೊಲೀಸರ ಪ್ರಕಾರ, ಬೆಳಿಗ್ಗೆ 7.30 ರ ಸುಮಾರಿಗೆ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರೀ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಆಕೆಯ ತಾಯಿ ರೇಷ್ಮಾ ಮತ್ತು ಖುಷಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬೆಳಗಾವಿ: ಕರ್ನಾಟಕದಲ್ಲಿ ಭಾರಿ ಮಳೆ ಆರಂಭವಾಗಿರುವಂತೆಯೇ ಅತ್ತ ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ.
ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Leave a Reply