
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಬಾಲಕರ ವಿದ್ಯಾರ್ಥಿ ನಿಲಯ ಸವದತ್ತಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹನೆ ಮತ್ತು ಕಲ್ಯಾಣ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೇರವೇರಿಸಿದರು. ನಂತರ ಮಾತನಾಡಿದ ಅವರು ತಂದೆ ತಾಯಿಯರಿಗೆ ಮತ್ತು ಹಿರಿಯ ನಾಗರಿಕರಿಗೆ ಸಂವಿಧಾನದ ಮೇರೆಗೆ ಖಾತರಿ ನೀಡಿರುವ ಮತ್ತು ಅಂಗೀಕರಿಸಿರುವ ಪಾಲನೆ-ಪೋಷಣೆಗಾಗಿ ಮತ್ತು ಕಲ್ಯಾಣಕ್ಕಾಗಿ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಹೆಚ್ಚು ಪರಿಣಾಮಕಾರಿ ಉಪಬಂಧಗಳನ್ನು ಕಲ್ಪಿಸುವ ಅಧಿನಿಯಮ ತಂದೆ ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ-ಪೋಷಣೆ ಮತ್ತು ಕಲ್ಯಾಣ ಅಧಿನಿಯಮ ಎಂದು ಹೇಳಿದರು. ಜೊತೆಗೆ ವಿದ್ಯಾರ್ಥಿಗಳು 18 ವರ್ಷ ಪೂರೈಸುವ ಮೊದಲು ವಾಹನ ಚಲಾವನೆ ಮಾಡಬಾರದು ಎಂದರು ಮತ್ತು ಇವತ್ತಿನ ದಿನಮಾನಗಳಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ವಿದ್ಯಾರ್ಥಿಗಳು ಮೋಬೈಲ್ ಪೋನ್, ಇಂಟರನೆಟ್ ಬಳಸುವ ಮುನ್ನ ಅತ್ಯಂತ ಜಾಗರೂಕರಾಗಿರಬೇಕು ಎಂದು ಹೇಳಿದರು.
ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಎಮ್.ಎ. ಅಂಗಡಿ ರವರು ಮಾತನಾಡಿ ಕಾನೂನು ಸೇವೆಗಳ ಪ್ರಾಧಿಕಾರದ ಕಾಯ್ದೆ 1987, ನವೆಂಬರ್ 9, 1995 ರಂದು ಜಾರಿಗೆ ಬಂದ ದಿನದ ಆರಂಭದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿವವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕಾನೂನು ಸೇವೆಗಳ ದಿನದಂದು, ದೇಶದಾದ್ಯಂತ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳು ಉಚಿತ ಕಾನೂನು ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ತಿಳಿಸಲು ಕಾನೂನು ಸೇವೆಗಳ ಪ್ರಾಧಿಕಾರಗಳು ಒದಗಿಸುವ ವಿವಿಧ ಸೇವೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಪ್ರತಿ ವರ್ಷ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಆರ್.ಕುಲಕರ್ಣಿ, ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಯಾದ ಎಸ್.ಎಸ್. ಕಾಳಪ್ಪನವರ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಿ.ಬಿ.ಚಿಂಚೊಳ್ಳಿ ಸ್ವಾಗತಿಸಿದರು, ಎಮ್.ಬಿ.ದಾದಾನಾಯ್ಕರ ನಿರೂಪಿಸಿ, ವಂದಿಸಿದರು.











Leave a Reply